ಡಿ. 26; ಭಂಡಾರಿ ಯುವವೇದಿಕೆ ಕುಂದಾಪುರ, ಕೆ.ಎಂ.ಸಿ ಮಣಿಪಾಲ ಸಹಯೋಗ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಕುಂದಾಪುರ: ಭಂಡಾರಿ ಯುವವೇದಿಕೆ ಕುಂದಾಪುರ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಡಿ.26 ಭಾನುವಾರ ಕುಂದಾಪುರ ಜ್ಯೂನಿಯರ್ ಕಾಲೇಜು ವಠಾರದಲ್ಲಿ ನಡೆಯಲಿದೆ. ಇದೆ ಸಂದರ್ಭ ತಜ್ಞ ವೈದ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ
ಭಂಡಾರಿ ಯುವವೇದಿಕೆ ಕುಂದಾಪುರದ ಅಧ್ಯಕ್ಷ ಲೋಕೇಶ್ ಭಂಡಾರಿ ಕೋಟೇಶ್ವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು ಕಾರ್ಯಕ್ರಮವನ್ನು ಕುಂದಾಪುರ ಸಾರ್ವಜನಿಕ ಆಸ್ಪತ್ರೆ ವೈದ್ಯರಾದ ಡಾ. ನಾಗೇಶ್ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಬಾರಕೂರು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಕಡಂದಲೆ ಸುರೇಶ್ ಭಂಡಾರಿ, ಅತಿಥಿಗಳಾಗಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ಎಂ.ಸಿ ಮಣಿಪಾಲ ಆಸ್ಪತ್ರೆ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಉದ್ಯಮಿ ಸುರೇಂದ್ರ ಶೆಟ್ಟಿ, ಭಂಡಾರಿ ಮಹಾಮಂಡಲದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀಧರ ಭಂಡಾರಿ ಬಿರ್ತಿ, ಮಾಜಿ ಪ್ರ. ಕಾರ್ಯದರ್ಶಿ ಸೋಮಶೇಖರ್ ಭಂಡಾರಿ, ಖ್ಯಾತ ನ್ಯಾಯವಾದಿ ರವಿಕಿರಣ್ ಮುರುಡೇಶ್ವರ, ಜೆ.ಸಿ.ಐ ಕುಂದಾಪುರ ಸಿಟಿ ಅಧ್ಯಕ್ಷ ವಿಜಯ ಭಂಡಾರಿ ತೆಕ್ಕಟ್ಟೆ, ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಅಶೋಕ ಭಂಡಾರಿ ಕೋಣಿ, ಕುಂದಾಪುರ ಸವಿತಾ ಸಮಾಜದ ಅಧ್ಯಕ್ಷ ಸುಭಾಷ್ ಭಂಡಾರಿ ಗುಜ್ಜಾಡಿ, ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಸುಭಾಷ್ ಭಂಡಾರಿ ಹಂಗಳೂರು, ಭಾರತ ಶ್ರೇಷ್ಟ ರತ್ನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಾಗರಾಜ ಖಾರ್ವಿ ಮೊದಲಾದವರು ಉಪಸ್ಥಿತರಿರಲಿದ್ದಾರೆ.
ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡು ಮಧ್ಯಾಹ್ನ 2 ಗಂಟೆಯವರೆಗೆ ಇರಲಿದೆ. ಹೃದಯ ತಪಾಸಣೆ, ಶ್ವಾಸಕೋಶ ತಪಾಸಣೆ, ಎಲುಬು ಮತ್ತು ಕೀಲು ತಪಾಸಣೆ, ಚರ್ಮರೋಗ, ಮಕ್ಕಳ ರೋಗ ತಪಾಸಣೆ ಜೊತೆಗೆ ಉಚಿತ ಮೆಡಿಸಿನ್ ವಿಭಾಗ ಇರಲಿದೆ ಎಂದು ಭಂಡಾರಿ ಯುವವೇದಿಕೆ ಕುಂದಾಪುರದ ಅಧ್ಯಕ್ಷ ಲೋಕೇಶ್ ಭಂಡಾರಿ, ಗೌರವಾಧ್ಯಕ್ಷ ಹರೀಶ್ ಭಂಡಾರಿ ಮೊಳಹಳ್ಳಿ, ಕಾರ್ಯದರ್ಶಿ ಸಾತ್ವಿಕ್ ಭಂಡಾರಿ ಹೊಂಬಾಡಿ, ಗೌರವ ಸಲಹೆಗಾರ ಹರೀಶ್ ಭಂಡಾರಿ ಕುಂಭಾಸಿ, ಸಂಘಟನಾ ಕಾರ್ಯದರ್ಶಿ ರವೀಂದ್ರ ಭಂಡಾರಿ ತೆಕ್ಕಟ್ಟೆಯವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.