ರಾಜ್ಯ
ಡಿ. 28 ರಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ
ಬೆಂಗಳೂರು: ರಾಜ್ಯಾದ್ಯಂತ ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು. ಸಭೆಯ ಬಳಿಕ ಆರೋಗ್ಯ ಸಚಿವ ಡಾ. ಸುಧಾಕರ್ ಮಾಧ್ಯಮದ ಜೊತೆಗೆ ಮಾತನಾಡುತ್ತಾ ಸಭೆಯ ಮುಖ್ಯಾಂಶಗಳನ್ನು ನೀಡಿದರು.
ಸಭೆಯ ಮುಖ್ಯಾಂಶಗಳು:
* ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ
* ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಹೊಸ ವರ್ಷಾಚರಣೆ ನಿಷೇಧ
* ಹೋಟೆಲುಗಳಲ್ಲಿ, ಪಬ್, ರೆಸ್ಟೋರೆಂಟ್, ಬಾರ್ ಆಸನದ ಮಿತಿಯ ಶೇ. 50 ರಷ್ಟು ಮಂದಿಗೆ ಮಾತ್ರ ಪ್ರವೇಶ.
* ರಾಜ್ಯಾದ್ಯಂತ ಶೇಕಡ 97 ರಷ್ಟು ಜನರು ಮೊದಲ ಡೋಸ್ ಪಡೆದಿದ್ದು ಇದನ್ನು ಶೇಕಡ ನೂರರಷ್ಟಾಗಲು ಸಮರೋಪಾದಿಯಲ್ಲಿ ಲಸಿಕಾಕರಣಕ್ಕೆ ಶೀಘ್ರದಲ್ಲಿ ಕ್ರಮ.