ರಾಜ್ಯ
ಸರಕಾರಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಯುವಕ ಸಾವು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯುವಕನೊಬ್ಬ ಚಿಕ್ಕಮಗಳೂರಿನಲ್ಲಿ ಸರಕಾರಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ತುಂಬೆತಡ್ಕ ನಿವಾಸಿ ಚೆನ್ನಕೇಶವ (28) ಎಂಬವ ಸಾವನ್ನಪ್ಪಿದ ಯುವಕ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕ್ಷ ಕಿರಣದ ಟೆಕ್ನಿಶಿಯನ್ ಆಗಿದ್ದ ಚೆನ್ನಕೇಶವ ಅವರು ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದು, ಅಜ್ಜಿ ಮನೆಯಾದ ಚಿಕ್ಕಮಗಳೂರಿಗೆ ಹೋಗಿದ್ದರು. ಅಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದಕ್ಕೆ ಹೋಗುತ್ತಿದ್ದಾಗ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಚಿಕ್ಕಮಗಳೂರು ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ