ಕರಾವಳಿ

ಕಾಪು:-ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟ

ಕಾಪು : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹತ್ತಿಕೊಂಡ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಶುಕ್ರವಾರ ಇಂದು  ಮುಂಜಾನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 66ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದಂತೆ ಲಾರಿಯ ಟಯರ್ ಸ್ಫೋಟಗೊಂಡಿದೆ. ಈ ವೇಳೆ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ ಮರದ ದಿಮ್ಮಿಗೆ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು.

ಘಟನೆಯಿಂದಾಗಿ ಲಾರಿಗೆ ಹಾನಿ ಸಂಭವಿಸಿದೆ. ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿವೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!