ಕರಾವಳಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಬಸ್ಸಿಗೆ ಢಿಕ್ಕಿ ಹೊಡೆದ ಗೂಡ್ಸ್ ವಾಹನ ಚಾಲಕ ಗಂಭೀರ..!
ಉಡುಪಿ:-ಬಸ್ ಮತ್ತು ಗೂಡ್ಸ್ ಟೆಂಪೊ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ನಡೆದಿದೆ.
ಟಾಟಾ ಏಸ್ ಟೆಂಪೋ ಕರಾವಳಿ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದು, ಶಿರಿಬೀಡು ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಎದುರಿಗಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಟೆಂಪೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಂಪೋ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಸ್ಥಳಕ್ಕೆ ಉಡುಪಿ ನಗರ ಸಂಚಾರಿ ಠಾಣಾ ಪೋಲಿಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.