ಆರೋಗ್ಯಕರಾವಳಿ

ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಒಡವೆಗಳು ಕಳ್ಳತನ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಕಲ್ಯಾ ಗ್ರಾಮದ ಕಂಗಿತ್ಲು ಎಂಬಲ್ಲಿ ಇಲ್ಲಿನ ನಿವಾಸಿ ಉಷಾ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ.

ಆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಅಡುಗೆ ಮನೆಯ ಬಾಗಿಲಿನ ಬೀಗ ಮುರಿದುಒಳಪ್ರವೇಶಿಸಿ ಕೊಠಡಿಯಲ್ಲಿದ್ದ ಗೋದ್ರೆಜ್‌ ಕಪಾಟಿನಲ್ಲಿಟ್ಟಿದ್ದ ಪರ್ಸ್‌ ಹಾಗೂ ಸ್ಟೀಲಿನ ಡಬ್ಬದಲ್ಲಿ ಇರಿಸಿದ್ದ ಸುಮಾರು 4,50 ಲಕ್ಷ ರೂ ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ಘಟನೆಗೆ ಸಂಬಂದಿಸಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!