ಕರಾವಳಿ

ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ಸಿದ್ದತೆ : ಉಸ್ತುವಾರಿ ಸಚಿವ ಎಸ್.ಅಂಗಾರ ವೀಕ್ಷಣೆ

ಉಡುಪಿ, ಮಾರ್ಚ್ 09 : ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ತಯಾರಿ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಇಂದು ಕಟಪಾಡಿಯಲ್ಲಿ ವೀಕ್ಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು , ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡಿರುವ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವು , ನಾಳೆ ಬೆಳಗ್ಗೆ 11 ಗಂಟೆಯಿAದ ಕಟಪಾಡಿಯ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಚಿವರುಗಳು, ಜಿಲ್ಲೆಯ ಶಾಸಕರುಗಳು ಹಾಗೂ ಜನಪ್ರತಿನಿಧಿಗಳು , ಅಧಿಕಾರಿಗಳು ಸೇರಿದಂತೆ ವಿವಿಧ ಯೋಜನೆಯ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ಕಂದಾಯ ಇಲಾಖೆಯ 1,48,479, ಸಾರ್ವಜನಿಕ ಶಿಕ್ಷಣ ಇಲಾಖೆಯ 3,80,425, ಕಾರ್ಮಿಕ ಇಲಾಖೆ 5,44,361, ಗ್ರಾಮೀಣ ಕುಡಿಯುವ ನೀರು ಯೋಜನೆ 2,47,179, ಸಹಕಾರ ಇಲಾಖೆಯ 75,000, ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆ 1,96,945, ಕೆ.ಎಂ.ಎಫ್ ನ 96,996, ಕೃಷಿ ಇಲಾಖೆಯ 3,16,320, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 65,157 ಮೀನುಗಾರಿಕೆ ಇಲಾಖೆಯ 14,568 ಫಲಾನುಭವಿಗಳು ಸೇರಿದಂತೆ ಮತ್ತಿತರ ಇಲಾಖೆಯ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದರು.
ಪ್ರತೀ ಇಲಾಖೆಯವರು ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಉಚಿತವಾಗಿ ಮಾಡಲಾಗಿದೆ ಎಂದರು.
ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕ ಮಾಹಿತಿ ನೀಡಲು ಇಲಾಖಾವಾರು ಮಾಹಿತಿ ವಸ್ತುಪ್ರದರ್ಶನ ಮಳಗೆಗಳ್ನೂ ಸಹ ತರೆಯಲಾಗಿದ್ದು, ಸಮ್ಮೇಳನದಲ್ಲಿ ವಿವಿಧ ಸವಲತ್ತುಗಳನ್ನೂ ಸಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.
ಸಮ್ಮೇಳನಕ್ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಅಪರ ಜಿಲ್ಲಾಧಿಕರಿ ವೀಣಾ ಬಿ.ಎನ್. ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!